ಬೆಂಗಳೂರು: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.
ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾಶಿ ದರ್ಶನ ರೈಲು ಪ್ಯಾಕೇಜ್ ಟೂರ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುನ್ನುಡಿ ಬರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಪುನರ್ ನಿರ್ಮಾಣಗೊಳಿಸಲಾಗಿರುವ ಭವ್ಯ ಕಾಶಿ – ದಿವ್ಯ ಕಾಶಿಯನ್ನು ರಾಜ್ಯದ ಜನರು ಕಡಿಮೆ ವೆಚ್ಚದಲ್ಲಿ ಕಣ್ತುಂಬಿಕೊಳ್ಳಲಿ ಎನ್ನುವ ಪ್ರಮುಖ ಉದ್ದೇಶದಿಂದ ಈ ರೈಲು ಪ್ರವಾಸವನ್ನು ಆಯೋಜಿಸಲಾಗಿದೆ ಎಂದು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.
ನವೆಂಬರ್ 23, 2022 ರಂದು ಎರಡನೇ ಟ್ರಿಪ್ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಯ ಟ್ರಿಪ್‌ನ ದಿನಾಂಕವನ್ನು ಘೋಷಣೆ ಮಾಡಲಾಗಿತ್ತು. ಟಿಕೆಟ್ ಬುಕ್ಕಿಂಗ್ ಪ್ರಾರಂಭ ಮಾಡಿದ ಎರಡೇ ದಿನಗಳಲ್ಲಿ ಎರಡನೇ ಟ್ರಿಪ್ ನ ಎಲ್ಲಾ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಕಾಶಿ ದರ್ಶನ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ದೊರೆಯುತ್ತಿರುವುದು ಬಹಳ ಸಂತಸದ ಸಂಗತಿಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಮುಂದಿನ ಟ್ರಿಪ್‌ಗಳ ದಿನಾಂಕವನ್ನು ಘೋಷಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.