ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ್ ಬಳಿ ಭೀಕರ ಅಪಘಾತಕ್ಕೆ 20 ಮಂದಿ ಬಲಿಯಾಗಿದ್ದಾರೆ.
ಶುಕ್ರವಾರ ಮುಂಜಾನೆ ಈ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಆ ಭೀಕರ ಅಪಘಾತದಲ್ಲಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ. ಹಲವು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡರು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















































