ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್, ಸುಳ್ಳು ಪ್ರಾಪಗಂಡಾ ಮಾಡುವ ಬಿಜೆಪಿಗೆ ಅದು ಅಭ್ಯಾಸವಾಗಿ ಮಾರ್ಪಟ್ಟಿದೆ, ಅದೇ ಅಭ್ಯಾಸದಂತೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ತಿರುಚಿ ಸಮುದಾಯಗಳ ನಡುವೆ ದ್ವೇಷ ಬಿತ್ತುವ ಪ್ರಚೋದನಾತ್ಮಕ ಪೋಸ್ಟ್ ಮಾಡಿದ್ದ ಬಿಜೆಪಿ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ತಿಳಿಸಿದೆ.
ಬಿಜೆಪಿಯ ಯಾವುದೇ ಅಪಪ್ರಚಾರ, ಸುಳ್ಳುಗಳನ್ನು ಸಹಿಸುವ ಮಾತೇ ಇಲ್ಲ, ನಮ್ಮ ಕಾನೂನು ರೀತಿಯ ಹೋರಾಟ ಮುಂದುವರೆಯುತ್ತಲೇ ಇರುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ಸುಳ್ಳು ಪ್ರಾಪಗಂಡಾ ಮಾಡುವ ಬಿಜೆಪಿಗೆ ಅದು ಅಭ್ಯಾಸವಾಗಿ ಮಾರ್ಪಟ್ಟಿದೆ, ಅದೇ ಅಭ್ಯಾಸದಂತೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ತಿರುಚಿ ಸಮುದಾಯಗಳ ನಡುವೆ ದ್ವೇಷ ಬಿತ್ತುವ ಪ್ರಚೋದನಾತ್ಮಕ ಪೋಸ್ಟ್ ಮಾಡಿದ್ದ @BJP4Karnataka ವಿರುದ್ಧ ದೂರು ದಾಖಲಿಸಲಾಗಿದೆ.
ಬಿಜೆಪಿಯ ಯಾವುದೇ ಅಪಪ್ರಚಾರ, ಸುಳ್ಳುಗಳನ್ನು ಸಹಿಸುವ ಮಾತೇ ಇಲ್ಲ,… pic.twitter.com/DuIYVDJEBn
— Karnataka Congress (@INCKarnataka) April 27, 2024