ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟದಲ್ಲೇ ‘ಗ್ಯಾರೆಂಟಿ’ ಯೋಜನೆಗಳನ್ನು ಜಾರಿಗೊಳಿಸಲು ನಿರ್ದಾರ ಕೈಗೊಳ್ಳಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನುಡಿದಂತೆ ನಡೆಯುತ್ತಾ ಬಂದಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿದ್ದಾಗ ನಾವು 165 ಭರವಸೆಗಳನ್ನು ನೀಡಿ 158 ಭರವಸೆ ಈಡೇರಿಸಿದ್ದೇವೆ. ಆದರೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ತಮ್ಮ ಪ್ರಣಾಳಿಕೆ ಜಾರಿ ಮಾಡಲು ಪ್ರಾಮಾಣಿಕತೆ ತೋರಲಿಲ್ಲ. ಈಗ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ ಎಂದರು.
ನಮ್ಮ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ 200 ಯುನಿಟ್ ವಿದ್ಯುತ್ ಉಚಿತ, ಯುವನಿಧಿ ಮೂಲಕ ಪದವೀಧರರಿಗೆ 3000 ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ಮಾಸಿಕ ನಿರುದ್ಯೋಗ ಭತ್ಯೆ. ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ಹುದ್ದೆ ಹಾಗೂ ಕೇಂದ್ರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇದ್ದರೂ ತುಂಬುತ್ತಿಲ್ಲ. ಹೀಗಾಗಿ ನಿರುದ್ಯೋಗ ಭತ್ಯೆ ನೀಡಲು ತೀರ್ಮಾನಿಸಿದ್ದೇವೆ. ಇನ್ನು ಅನ್ನಭಾಗ್ಯ ಯೋಜನೆ ಮೂಲಕ ಪ್ರತಿ ಬಡ ಕುಟುಂಬ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಉಚಿತ. ಗೃಹಲಕ್ಷ್ಮಿ ಯೋಜನೆ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ಪ್ರತಿ ತಿಂಗಳು ಮನೆಯೊಡತಿಗೆ 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಪ್ರೋತ್ಸಾಹ ಧನ. ಇನ್ನು ಶಕ್ತಿ ಯೋಜನೆ ಮೂಲಕ ರಾಜ್ಯದ ಮಹಿಳೆಯರಿಗೆ ಸಾರ್ವಜನಿಕ ಬಸ್ ಗಳಲ್ಲಿ ಉಚಿತ ಪ್ರಯಾಣ. ಇದನ್ನು ನಾವು ಖಂಡಿತವಾಗಿ ಜಾರಿ ಮಾಡುತ್ತೇವೆ ಎಂದು ನಾನು ಗ್ಯಾರಂಟಿ ನೀಡುತ್ತೇನೆ. ಇದನ್ನು ಮೊದಲ ಸಚಿವ ಸಂಪುಟದಲ್ಲಿ ಜಾರಿ ಮಾಡಲಾಗುವುದು ಎಂದರು.ಇದರ ಜತೆಗೆ ನಮ್ಮ ಸರ್ಕಾರ ಇದ್ದಾಗ ಅನೇಕ ಕಲ್ಯಾಣಕಾರಿ ಯೋಜನೆ ಕೈಗೊಂಡಿದ್ದೇವೆ. SCP TSP ಕಾಯ್ದೆ ಮಾಡಿದ್ದು, ಬಿಜೆಪಿ ಸರ್ಕಾರ ಅದನ್ನು ಸರಿಯಾಗಿ ಪಾಲಿಸಿಲ್ಲ. ನಮ್ಮ ಸರ್ಕಾರ ಇದನ್ನು ಪರಿಣಾಮಕಾರಿಯಾಗಿ ಜಾರಿ ಮಾಡುತ್ತೇವೆ. ನಮ್ಮ ಈ ಯೋಜನೆಗಳನ್ನು ಜನರು ಮೆಚ್ಚಿದ್ದಾರೆ ಎಂದರು.
LIVE: @INCKarnataka’s Manifesto launch for Karnataka Assembly Elections, 2023 #CongressBaralidePragatiTaralide https://t.co/lTuEkpBCjV
— Mallikarjun Kharge (@kharge) May 2, 2023
ನನಗೆ ಬೇರೆ ರಾಜ್ಯಗಳಿಂದ ದೂರವಾಣಿ ಕರೆ ಹಾಗೂ ಪತ್ರ ಬರುತ್ತಿದ್ದು, ನಿಮ್ಮ ಗ್ಯಾರಂಟಿ ಕಾರ್ಡ್ ಹೆಚ್ಚು ಪರಿಣಾಮಕಾರಿಯಾಗಿದ್ದು, ಇದರ ಬಗ್ಗೆ ಹೆಚ್ಚು ಪ್ರಚಾರ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಜನ. ನಾವು ಟೊಳ್ಳು ಭರವಸೆ ನೀಡುವುದಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂರುವುದು ನಿಶ್ಚಿತ, ನಮ್ಮ 150 ಕ್ಷೇತ್ರಗಳ ಗುರಿ ತಲುಪುತ್ತೇವೆ ಎಂದವರು ಹೇಳಿದರು.
ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್:
ರಾಜ್ಯ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ಭರವಸೆ, ಸಮಸ್ಯೆಗಳಿಗೆ ಪರಿಹಾರ ನೀಡಲು ಪ್ರಣಾಳಿಕೆಯನ್ನು ತಯಾರು ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದ ಬದ್ಧತೆ, ಧ್ಯೇಯೋದ್ದೇಶಗಳ ಚೌಕಟ್ಟಿನಲ್ಲಿ ಜನರ ಸಮಸ್ಯೆ ಅರ್ಥ ಮಾಡಿಕೊಳ್ಳಲು ರಾಜ್ಯ ಪ್ರವಾಸ ಮಾಡಿ ಎಲ್ಲಾ ಜನಸಮುದಾಯ ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ. ಇದರ ಆಧಾರದ ಮೇಲೆ ಪ್ರಣಾಳಿಕೆ ತಯಾರು ಮಾಡಿದ್ದೇವೆ. ನಮ್ಮ ಸಮಾಜದಲ್ಲಿದ್ದ ಕೆಳಸ್ಥರದ ಸಮುದಾಯದ ಸಂಘ ಸಂಸ್ಥೆಗಳನ್ನು, ವಿಶೇಷವಾಗಿ ಪೌರಕಾರ್ಮಿಕ, ಕೃಗಿಗ್ ಕಾರ್ಮಿಕರು, ಚಾಲಕ ವರ್ಗ, ವಕೀಲರು, ವೈದ್ಯರು, ಪ್ರಗತಿ ಪರ ಹೋರಾಟಗಾರರು, ಸರ್ಕಾರಿ ನೌಕರರು, ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳು, ಅಸಂಘಟಿತ ಕಾರ್ಮಿಕರು, ಧಾರ್ಮಿಕ ಸಂಘಟನೆ, ಅಲ್ಪಸಂಖ್ಯಾತರು, ಲೇಖಕರು, ಸಿಐಐ ಪ್ರತಿನಿಧಿಗಳ ಜತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಬೆಂಗಳೂರಿನಲ್ಲಿನ ಸಮಸ್ಯೆ ಗುರುತಿಸಲು ಅನೇಕ ಸಂಘ ಸಂಸ್ಥೆಗಲನ್ನು ಭೇಟಿ ಮಾಡಿ ಸಲಹೆ ಪಡೆದಿದ್ದೇವೆ. ಇದೆಲ್ಲರದ ಜತೆಗೆ ರಾಜಸ್ಥಾನ, ಹಿಮಾಚಲ ಪ್ರದೇಶ, ಛತ್ತೀಸ್ ಗಡ ಗಳಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ ಯೋಜನೆಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ಕೆಪಿಸಿಸ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಪಕ್ಷದ ಹಿರಿಯ ನಾಯಕರ ಜತೆ ಚರ್ಚಿಸಿ ನಾವು ಈ ಪ್ರಣಾಳಿಕೆಯನ್ನು ತಯಾರು ಮಾಡಿದ್ದೇವೆ. ರಾಜ್ಯದ ಜ್ವಲಂತ ಸಮಸ್ಯೆ ಅರಿತು, ನಮ್ಮ ಸರ್ಕಾರ ಕೊಟ್ಟ ಅನೇಕ ಯೋಜನೆಗಳ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯ ಒದಗಿಸಿ, ಅಭಿವೃದ್ಧಿ, ಶಾಂತಿ ಸ್ಥಾಪಿಸಲು ಈ ಪ್ರಣಾಳಿಕೆ ತಯಾರು ಮಾಡಿದ್ದೇವೆ ಎಂದರು.
ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ ಎಂಬ ಶಿರ್ಷಿಕೆ ಇಟ್ಟಿದ್ದು, ಕಾಂಗ್ರೆಸ್ ಬರಲಿದ, ಪ್ರಗತಿ ತರಲಿದೆ ಎಂಬ ಘೋಷವಾಕ್ಯವನ್ನು ಇಟ್ಟುಕೊಂಡಿದ್ದೇವೆ. ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಅಭಿವೃದ್ಧಿ ಮನದಲ್ಲಿಟ್ಟುಕೊಂಡು ಯುವಕರು, ಮಹಿಳೆಯರಿಗೆ ಆದ್ಯತೆ ನೀಡಿದ್ದೇವೆ. ಮುಂದಿನ 25 ವರ್ಷಗಳ ದೂರದೃಷ್ಟಿಯೊಂದಿಗೆ ಈ ಪ್ರಣಾಳಿಕೆಯನ್ನು ತಯಾರು ಮಾಡಿದ್ದೇವೆ ಎಂದವರು ತಿಳಿಸಿದರು.
ಈ ಪ್ರಣಾಳಿಕೆ ಜಾರಿಗೆ ಉನ್ನತ ಸಮಿತಿ ರಚಿಸಲಾಗುವುದು. ರಾಜ್ಯದಲ್ಲಿನ ಭ್ರಷ್ಟಾಚಾರದ ಬಗ್ಗೆ ದೇಶಕ್ಕೆ ತಿಳಿದಿದೆ. ಇದಕ್ಕಾಗಿ ರುವ ಕಾನೂನು ಜತೆಗೆ ಹೊಸ ಕಾನೂನು ಜಾರಿ ಮಾಡಿ ಲೋಕಾಯುಕ್ತಕ್ಕೆ ಹೆಚ್ಚಿನ ಶಕ್ತಿ ನೀಡುವ ಮೂಲಕ ಭ್ರಷ್ಟಾಚಾರ ನಿಯಂತ್ರಣ. ತಮಗೆಲ್ಲ ಗೊತ್ತಿರುವಂತೆ, ಹೊಸ ಪಿಂಚಣಿ ವ್ಯವಸ್ಥೆಯಿಂದ ತೊಂದರೆಯಾಗಿದೆ ಎಂದು 6 ಲಕ್ಷ ನೌಕರರು ಮನವಿ ನೀಡಿದ್ದರು. ಇದರ ಜತೆಗೆ ರಾಜಸ್ಥಾನ ಹಾಗೂ ಹಿಮಾಚಲ ಪ್ರದೇಶದಲ್ಲಿ ಜಾರಿ ಮಾಡಿರುವುದನ್ನು ಗಮನದಲ್ಲಿಟ್ಟುಕೊಂಡು 2006 ರಿಂದ ನೇಮಕಗೊಂಡಿರುವ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯಡಿ ತರಲು ಸಹನುಭೂತಿ ನಿರ್ಧಾರ ಮಾಡಲಾಗುವುದು ಎಂದ ಪರಮೇಶ್ವರ್, ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ 15 ಸಾವಿರಕ್ಕೆ ಹೆಚ್ಚಳ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರಕ್ಕೆ, ವಿಶ್ರಾಂತಿ ವೇತನ 2 ಲಕ್ಷಕ್ಕೆ ತೀರ್ಮಾನಿಸಿದ್ದೇವೆ. ಲೋಕೋಪಯೋಗಿ, ನೀರಾವರಿ, ಇಂಧನ, ನಗರಾಭಿವೃದ್ಧಿ ಇಲಾಖೆ ಟೆಂಡರ್ ನಲ್ಲಿ ಅಕ್ರಮ ಮಾಡುವ ಹಿನ್ನೆಲೆಯಲ್ಲಿ ಪಾರದರ್ಶಕ ಕಾನೂನು ತರಲು ತೀರ್ಮಾನಿಸಲಾಗಿದೆ. ಬಹುಮಹಡಿ ಸಂಕೀರ್ಣ ಮಾಲೀಕರು ಆಸ್ತಿ ವರ್ಗಾವಣೆ ಕುರಿತ ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದು, ಇದಕ್ಕೆ ಅಗತ್ಯವಾದ ಕಾನೂನು ತಿದ್ದುಪಡಿ ಮಾಡಲಾಗುವುದು. ರಾಯ್ ಪುರ ಕಾಂಗ್ರೆಸ್ ಅಧಿವೇಶನದಲ್ಲಿ ಎಂಎಸ್ ಪಿ ಕುರಿತಂತೆ ಪ್ರಸ್ತಾವ ಮಾಡಲಾಗಿತ್ತು. ಹೀಗಾಗಿ ಕೃಷಿ ಉಇತ್ಪನ್ನ ಬೆಲೆ ನಿಗದಿ ಆಯೋಗ ವರದಿ ಹಾಗೂಬೆಂಬಲ ಬೆಲೆ ಜಾರಿ. ನಾವು ಕೃಷಿ ಬೆಲೆ ಆಯೋಗ ಸ್ಥಾಪಿಸುತ್ತೇವೆ ಎಂದರು
ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆ ರದ್ದು ಮಾಡಿ ರೈತರ ಮೇಲೆ ದಾಖಲಾಗಿರುವ ರಾಜಕೀಯ ಪ್ರೇರಿತ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗುವುದು. ವಸತಿ ಸಮಸ್ಯೆಗೆ ತೊಡಕಾಗಿರುವ ಅರಣ್ಯ ಕಾಯ್ದೆ ತಿದ್ದುಪಡಿ ಮಾಡುತ್ತೇವೆ. ಹಾಲಿಗೆ ನೀಡಲಾಗುತ್ತಿದ್ದ ಹಾಲಿನ ಸಬ್ಸಿಡಿಯನ್ನು ಪ್ರತಿ ಲೀಟರ್ ಗೆ 5ರಿಂದ 7 ರೂ.ಗೆ ಹೆಚ್ಚಳ ಮಾಡಿದ್ದೇವೆ ಎಂದ ಅವರು, ಮೀನುಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿ ತರಲು ಇದರಲ್ಲಿ 12 ಸಾವಿರ ಕೋಟಿಯ ನೀಲ ಆರ್ಥಿಕತೆ ನಿರ್ಮಿಸಲು ಮತ್ಸ್ಯ ಕ್ರಾಂತಿ ಎಂಬ ಯೋಜನೆ ಮಾಡಲಾಗಿದೆ. ಇದಕ್ಕಾಗಿ 5 ಸಾವಿರ ಕೋಟಿ ಮೀಸಲು. ನೀರಾವರಿ ಯೋಜನೆಗಳಲ್ಲಿ ಒಟ್ಟು 5 ವರ್ಷಗಳಲ್ಲಿ 1.5 ಲಕ್ಷ ಕೋಟಿ ಮೀಸಲಿಟ್ಟು, ಮೇಕೆದಾಟಿಗೆ 9 ಸಾವಿರ ಕೋಟಿ, ಮಹದಾಯಿ ಯೋಜನೆಗೆ 3 ಸಾವಿರ ಕೋಟಿ, ಕೃಷ್ಣಾ ಮೇಲ್ದಂಡೆ, ಆಲಮಟ್ಟಿ, ಭದ್ರ ಮೇಲ್ದಂಡೆ, ವರಾಹಿ, ಎತ್ತಿನಹೊಳೆ ಯೋಜನೆಗೆ ಹಣ ನೀಡಲಾಗುವುದು. ಎತ್ತಿನಹೊಳೆ ಯೋಜನೆ 2 ವರ್ಷಗಳಲ್ಲಿ ಪೂರ್ಣಗೊಳಿಸುತ್ತೇವೆ. ಗಡಿ ಭಾಗ ಅಭಿವೃದ್ಧಿಗೆ 5 ಸಾವಿರ ಕೋಟಿ ಮೀಸಲಿಡಲು ನಿರ್ಧಾರ. ಉಡುಪಿಯ ಸರ್ಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಉತ್ತೇಜನ. ಎಂಎಸ್ ಎಂಇ ಗಳ ನಿರ್ಲಕ್ಷ್ಯ ಹಾಗೂ ಸಮಸ್ಯೆಗೆ ಪರಿಹಾರ ನೀಡಲು ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು 1 ಸಾವಿರ ಕೋಟಿ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು 5 ಸಾವಿರ ಕೋಟಿ ಮೀಸಲಿಡಲು ನಿರ್ಧಾರ. ನಮ್ಮ 200 ಯುನಿಟ್ ವಿದ್ಯುತ್ ಉಚಿತ ನೀಡಲು 5 ಸಾವಿರ ಮೆ.ವ್ಯಾಟ್ ಉತ್ಪಾದನೆಗೆ ಬೃಹತ್ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ನಿರ್ಧಾರ. ಮಹಿಳೆಯರಿಗೆ ಉಚಿತ ಬಸ್ ಸಂಚಾರ, ಅನ್ನಭಾಗ್ಯದ ಮೂಲಕ 10 ಕೆ.ಜಿ ಅಕ್ಕಿ ಉಚಿತ. ಶಿಕ್ಷಣದಲ್ಲಿ ಅವೈಜ್ಞಾನಿಕ ಎನ್ ಇಪಿ ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿ ಅನುಷ್ಠಾನ ಮಾಡುತ್ತೇವೆ. ವರ್ಷಕ್ಕೆ 2500 ಶಾಲೆಗಳ ಉನ್ನತೀಕರಣ. ಪ್ರತಿ ಕಂದಾಯ ವಿಭಾಗದಲ್ಲಿ ಜಯದೇವಾ ಹೃದ್ರೋಗ ಆಸ್ಪತ್ರೆ ಮಾದರಿಯಲ್ಲಿ ಹಾಗೂ ಕಿದ್ವಾಯಿ ಹಾಗೂ ನಿಮ್ಹಾನ್ಸ್ ಮಾದರಿಯ ಕ್ಯಾನ್ಸರ್ ಹಾಗೂ ಮನೋರೋಗ ಆಸ್ಪತ್ರೆಗಳ ನಿರ್ಮಾಣ. ಎಲ್ಲಾ ವಸತಿ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ. ಪರಿಶಿಷ್ಟ ಸಮುದಾಯಗಳ, ಲಿಂಗಾಯತರು, ಒಕ್ಕಲಿಗರು, ಅಲ್ಪಸಂಖ್ಯಾತ ಮೀಸಲಾತಿಗೆ ಮಿಸಲಾತಿ ಮಿತಿಯನ್ನು 50% ನಿಂದ 75% ಗೆ ಏರಿಕೆ ಮಾಡಲು ಕ್ರಮ. ವಾರ್ಷಿಕ 500ನಂತೆ 2500 ಕೋಟಿ ಮೀಸಲಿಟ್ಟು ನಾರಾಯಣ ಗುರು ಅಭಿನೃದ್ಧಿ ನಿಗಮ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.























































