ಬೆಂಗಳೂರು: ಈಶ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಭಾಗವಹಿಸಿರುವ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಕಂಡುಬಂದಿದೆ. ಡಿಕೆಶಿ ನಡೆಯನ್ನು ಬಿಜೆಪಿ ನಾಯಕರು ಸ್ವಾಗತಿಸಿದರೆ, ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ.
ಕಾಂಗ್ರೆಸ್ ನಾಯಕರ ನಿಲುವಿನ ಬಗ್ಗೆ ಟೀಕಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಹೈಕಮಾಂಡ್‌ಗೆ ಧಮ್ ಇದ್ದರೆ ಡಿ.ಕೆ.ಶಿವಕುಮಾರ್ ಅವರನ್ನು ಅಮಾನತು ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಮಂಡ್ಯದಲ್ಲಿ ಪ್ರತಿಕ್ರಿಯಿಸಿರುವ ಅವರು, ಡಿ.ಕೆ.ಶಿವಕುಮಾರ್ ಕುಂಭಮೇಳಕ್ಕೆ ಹೋದಾಗ ಕಾಂಗ್ರೆಸ್ ಹೈಕಮಾಂಡ್ ಏನೂ ಮಾಡಲಿಲ್ಲ. ಪ್ರಧಾನಿಯನ್ನು ಭೇಟಿ ಮಾಡಿದಾಗಲೂ ಏನೂ ಮಾಡಲಿಲ್ಲ. ಉತ್ತರಪ್ರದೇಶದ ಮುಖ್ಯಮಂತ್ರಿಯನ್ನು ಹಾಡಿ ಹೊಗಳಿದರೂ ಸುಮ್ಮನಿದ್ದರು. ಇತ್ತೀಚೆಗೆ ಈಶ ಫೌಂಡೇಶನ್‌ಗೆ ಹೋಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ಗೆ ಧಮ್ ಇದ್ದರೆ ಡಿ.ಕೆ.ಶಿವಕುಮಾರ್ ಅವರನ್ನು ಅಮಾನತು ಮಾಡಲಿ ಎಂದರು. ನಾವ್ಯಾರೂ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಷಕ್ಕೆ ಆಹ್ವಾನಿಸಿಲ್ಲ ಎಂದು ಅಶೋಕ್ ಹೇಳಿದರು.