ಬೆಳಗಾವಿ: ಮಹಿಳೆಯೊಬ್ಬಳು ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ಸಮೀಪದ ಚಿಂಚಲಿ ಬಳಿ ನಡೆದಿದೆ.
32 ವರ್ಷದ ಶಾರದಾ ಎಂಬವರು ತನ್ನ ಮಕ್ಕಳ ಜೊತೆ ನದಿಗೆ ಹಾರಿದ್ದಾರೆ. ಈ ಘಟನೆಯನ್ನು ಕಂಡ ಸ್ಥಳೀಯರು ಹೆಣ್ಣುಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸಗೆ ಸ್ಪಂದಿಸದೆ ಆಕೆ ಸಾವಿಗೀಡಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.