ಬೆಂಗಳೂರು: ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಅವರ ಮೇಲೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದವರು ಸೂಚಿಸಿದ್ದಾರೆ.
ಭಾಷಾಂತರಕಾರರ ಲೋಪವಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಆಯೋಗವು ನಡೆಸುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಮೊದಲು ಕನ್ನಡದಲ್ಲಿ ತಯಾರಿಸಿ, ನಂತರ ಇಂಗ್ಲೀಷ್ ಬಗ್ಗೆ ಭಾಷಾಂತರ ಮಾಡಲು ಆಯೋಗಕ್ಕೆ ಸೂಚನೆಯನ್ನು ನೀಡಲಾಗುವುದು ಎಂದವರು ತಿಳಿಸಿದ್ದಾರೆ.
ಏನೇ ಆದರೂ ಈಗ ಪ್ರಕರಣವು ಉಚ್ಛ ನ್ಯಾಯಾಲಯ ಹಾಗೂ ಕೆಎಟಿಗಳು ನೀಡುವ ಆದೇಶಗಳನ್ನು ಆಧರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು. ಈ ವಿಚಾರದಲ್ಲಿ ಯಾವುದೇ ಮುಲಾಜುಗಳು ಸರ್ಕಾರಕ್ಕಿಲ್ಲ ಎಂದವರು ತಿಳಿಸಿದ್ದಾರೆ.