ನವದೆಹಲಿ: ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಪ್ರಕಟಿಸಿದೆ.
ಕರ್ನಾಟಕದಲ್ಲಿ ತೀವ್ರ ಬರಗಾಲ ಉಂಟಾಗಿ ರೈತರು ಸಂಕಷ್ಟ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಕರ್ಯ ಸರ್ಕಾರ 18,172 ಕೋಟಿ ರೂಪಾಯಿ ನರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ಈ ನಡುವೆ, ಸುಪ್ರೀಂ ಕೋರ್ಟ್‌ನಲ್ಲಿನ ಬೆಳವಣಿಗೆಯ ಬೆನ್ನಲ್ಲೇ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬರ ಪರಿಹಾರ ಘೋಷಣೆ ಮಾಡಿದೆ.