ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ವಿಚಾರಣಾ ನ್ಯಾಯಾಲಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮಂಜೂರು ಮಾಡಿದ್ದ ಜಾಮೀನು ಆದೇಶವನ್ನುತಡೆಹಿಡಿಯುವಂತೆ ಕೋರಿ ಜಾರಿ ನಿರ್ದೇಶನಾಲಯ ಮಾಡಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಪುರಸ್ಕರಿಸಿದೆ. ಜೊತೆಗೆ ಜೂನ್ 20 ರಂದು ವಿಚಾರಣಾ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಜಾಮೀನು ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಮುಂದುವರಿಸಿದೆ. ಹೈಕೋರ್ಟ್’ನ ನಿರ್ಧಾರದಿಂದ ಕೇಜ್ರಿವಾಲ್ ಬಂಧಮುಕ್ತಿಯ ಪ್ರಯತ್ನಕ್ಕೆ ಹಿನ್ನಡೆಯಾಗಿದೆ.






















































