ನವದೆಹಲಿ: ಅರವಿಂದ್ ಕೇಜ್ರಿವಾಲ್ ಬಂಧನ ನಂತರ ಆಮ್ ಆದ್ಮಿ ಹಾಗೂ ಬಿಜೆಪಿ ನಾಯಕರ ನಡುವೆ ಜಟಾಪಟಿ ಮುಂದುವರಿದಿದೆ. ಇದೇ ವೇಳೆ, ದೆಹಲಿಯಲ್ಲಿ ಆಪ್ ಸರ್ಕಾರವನ್ನು ಕೆಡವಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಸಂಪುಟದ ಸಚಿವೆ ಅತಿಶಿ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅತಿಶಿ, ಆಪ್ ಸರ್ಕಾರವನ್ನು ನಿರ್ನಾಮ ಮಾಡಲು ಕೇಂದ್ರ ಸರಕಾರ ಯತ್ನಿಸುತ್ತಿದೆ. ಒಂದು ವೇಳೆ ದೆಹಲಿ ಸರ್ಕಾರ ಕೆಡವಲು ಪ್ರಯತ್ನ ನಡೆದದ್ದೇ ಆದರೆ ಜನ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.






















































