ಬೆಂಗಳೂರು: ವೆಸ್ಟ್ ನೈಲ್ (West Nile) ಜ್ವರದ ಭೀತಿ ಇದೀಗ ಜನರನ್ನು ಕಾಡತೊಡಗಿದೆ. ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರ ಹರಡುತ್ತಿದ್ದು, ನೆರೆ ರಾಜ್ಯಗಳು ಕಟ್ಟೆಚ್ಚರ ವಹಿಸಿವೆ.
ಕೇರಳ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಜಿಲ್ಲೆಗಳಲ್ಲೂ ತೀವ್ರ ನಿಗಾ ವಹಿಸಲು ಸರ್ಕಾರ ಸೂಚಿಸಿದೆ. ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ಜೆಲ್ಲೆ ಹೆಚ್ಡಿ ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಗಡಿಯೊಳಗೆ ಬಂದು ಹೋಗುವ ವಾಹನಗಳ ಸವಾರರ ಮೇಲೆ ನಿಗಾ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.