ಸನಾ: ಯಮನ್ ದೇಶದಲ್ಲಿ ಗಲ್ಲು ಶಿಕ್ಷೆಗೆ ಎದುರಿಸಬೇಕಿದ್ದ ಕೇರಳ ಮೂಲದ ನಿಮಿಷ ಪ್ರಿಯಾಗೆ ಬಿಗ್ ರಿಲೀಫ್ ಸಿಕ್ಕಿದೆ. ಗಲ್ಲು ಶಿಕ್ಷೆಯನ್ನು ಅಧಿಕೃತವಾಗಿರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಯಿಂದ ತಿಳುದುಬಂದಿದೆ.
ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ. ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಅಂತಿಮ ಸಭೆಯ ನಂತರ ಈ ಸುದ್ದಿ ಹೊರಬಿದ್ದಿದೆ.
ಜು.16ಕ್ಕೆ ಗಲ್ಲುಶಿಕ್ಷೆ ಎದುರಿಸಬೇಕಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ರದ್ದುಗೊಳಿಸಲಾಗಿದೆ. ಈ ಹಿಂದೆ ತಾತ್ಕಾಲಿಕವಾಗಿ ಮುಂದೂಡಿದ್ದ ಮರಣದಂಡನೆಯನ್ನು ಇದೀಗ ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ತಿಳಿಸಿದೆ.