ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರಾದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಅಪ್ಪಾಜಿಗೌಡ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್ ಗೌಡ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಶಾ ಸುರೇಶ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣ ಗೌಡ (ಸ್ಟಾರ್ ಚಂದ್ರು), ಶಾಸಕರಾದ ಉದಯ್, ರವಿ ಗಣಿಗ, ರಮೇಶ್ ಬಾಬು ಬಂಡ್ಡಿಸಿದ್ದೇಗೌಡ,ಎಂಎಲ್ಸಿ ದಿನೇಶ್ ಗೂಳಿಗೌಡ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇದೇ ಸಂದರ್ಭದಲ್ಲಿ ಮಾತನಾಡಿದರು.