ಮಡಿಕೇರಿ: ಕೊಡಗು ಜಿಲ್ಲೆಯನ್ನು ಬೆಚ್ಚಿ ಬೀಳಿಸಿರುವ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಯವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯನ್ನು ಪ್ರಕಾಶ್ ಎಂಬಾತ ತಲೆ ಕಡಿದು ಕೊಂದು ಪರಾರಿಯಾಗಿದ್ದ. ಎಸ್ಎಸ್ಎಲ್ಸಿ ಫಲಿತಾಂಶದಿಂದ ಸಂತಸದಲ್ಲಿದ್ದ ಬಾಲಕಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದ ಪ್ರಕಾಶ್ ಪರಾರಿಯಾಗಿದ್ದ.
ಮೇ 09ರಂದು ಈ ಕೊಲೆ ಪ್ರಕರಣ ನಡೆದಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದ ಪೊಲೀಸರು ಸೋಮವಾರಪೇಟೆ ಸಮೀಪ ಹಳ್ಳಿಯೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್ನನ್ನು ಬಂಧಿಸಿದ್ದಾರೆ.


























































