ದಾವಣಗೆರೆ: ಚನ್ನಗಿರಿ ಠಾಣೆಯ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿರುವ ಘಟನೆ ಖಂಡಿಸಿ ಸಾರ್ವಜನಿಕರು ರೊಚ್ಚಿಗೆದ್ದಿದ್ದಾರೆ.
ಒಸಿ (ಮಟ್ಕಾ) ಆಡಿಸುತ್ತಿದ್ದ ಆರೋಪದಲ್ಲಿ ಚನ್ನಗಿರಿ ಪಟ್ಟಣದ ನಿವಾಸಿಯ ಅದೀಲ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಪೊಲೀಸ್ ವಶದಲ್ಲಿದ್ದಾಗಲೇ ಆರೋಪಿ ಮೃತಪಟ್ಟಿದ್ದಾನೆ. ಲೋ ಬಿಪಿ ಕಾರಣದಿಂದ ಅಸ್ವಸ್ಥನಾದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಸುದ್ದಿ ತಿಳಿದು ಪೊಲೀಸ್ ಠಾಣೆಯತ್ತ ದೌಡಾಯಿಸಿದ ಮೃತನ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ. ಪೊಲೀಸ್ ಠಾಣೆ ಗೆ ನುಗ್ಗಿ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಇದು ಲಾಕಪ್ ಡೆತ್ ಆಗಿದ್ದು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆರೋಪಿಸಿದ್ದಾರೆ.




















































