ಬೆಂಗಳೂರು: ದಕ್ಷಿಣ ಭಾರತೀಯ ಚಲನಚಿತ್ರರಂಗದ ಹೆಸರಾಂತ ನಟಿ, ಅಭಿನಯ ಸರಸ್ವತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಬಿ. ಸರೋಜಾದೇವಿ (87) ಅವರು ಸೋಮವಾರ ಬೆಳಿಗ್ಗೆ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ತಿಂಗಳಿಂದ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದರೂ, ಮನೆಯಲ್ಲಿ ಆರೈಕೆಯಲ್ಲಿದ್ದಾಗಲೇ ಕೊನೆಯುಸಿರೆಳೆದರು. ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ಅವರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ‘ನಟಸಾರ್ವಭೌಮ’ ಅವರ ಕೊನೆಯ ಚಿತ್ರ ವಾಗಿದೆ. ಕನ್ನಡ ಮಾತ್ರವಲ್ಲ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಅವರು ನಟಿಸಿ ಅಭಿನಯ ಶಾರದೆ ಎಂದು ಗುರುತಾಗಿದ್ದರು.