ಗಾಜಾ: ಇಸ್ರೇಲ್ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯಯಾದಲ್ಲಿ ಸಂಘರ್ಷ ತೀವ್ರಗೊಂಡಿದೆ. ಇಸ್ರೇಲಿ ವಾಯುಪಡೆಯ ದಕ್ಷಿಣ ಗಾಜಾ ಪಟ್ಟಿಯಲ್ಲಿರುವ ರಫಾದಲ್ಲಿ ಕಟ್ಟಡವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.
ಬುಧವಾರ ಮುಂಜಾನೆ ಮುಂಜಾನೆ ಜನ ನಿಬಿಡ ಪ್ರದೇಶದ ಮೇಲೆ ಈ ದಾಳಿ ನಡೆದಿದೆ. ದಾಳಿಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಕಳೆದ ಅಕ್ಟೋಬರ್ 7ರಂದು ಹಮಾಸ್ ದಾಳಿಯ ನಂತರ ಅಕ್ಟೋಬರ್ 27, 2023 ರಂದು ಗಾಜಾಕ್ಕೆ ಇಸ್ರೇಲ್ ರಕ್ಷಣಾ ಪಡೆಗಳು (IDF) ಮಿಲಿಟರಿ ಕಾರ್ಯಾಚರಣೆ ನಡೆಸಿದೆ. ಈ ಸುದೀರ್ಘ ಸಂಘರ್ಷದಲ್ಲಿ ಈವರೆಗೆ 33,000 ಕ್ಕೂ ಹೆಚ್ಚು ಪ್ಯಾಲೇಸ್ಟಿನಿಯರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ.