ಹೈದರಾಬಾದ್: ಉದಯೋನ್ಮುಖ ಗಾಯಕಿ ಮಂಗ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ವಾಪಾಸಾಗುತ್ತಿದ್ದ ವೇಳೆ ಮಂಗ್ಲಿಅವರಿದ್ದ ಕಾರು ಅಪಘಾತಕ್ಕೀಡಾಗಿದೆ. ಮಂಗ್ಲಿ ಅವರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ಮೂಲಗಳು ತಿಳಿಸಿವೆ.
ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಬಳಿ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಬಳಿಕ ಬೆಂಗಳೂರು-ಹೈದರಾಬಾದ್ ಹೆದ್ದಾರಿ ಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಶಂಶಾಬಾದ್ ತೊಂಡುಪಲ್ಲಿ ಬಳಿ ಅವರಿದ್ದ ಕಾರಿಗೆ ಸಣ್ಣ ಟ್ರಕ್ ಗುದ್ದಿದೆ ಟ್ರಕ್ ಡಿಕ್ಕಿಯಾಗಿದೆ. ಭಾನುವಾರ ರಾತ್ರಿ ಈ ಅಪಘಾತ ಸಂಭವಿಸಿದೆ.


























































