ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಲಕ್ಷ್ಮಿ’ ಯೋಜನೆಗೆ ಗುರುವಾರದಿಂದ ಅರ್ಜಿ ಸಲ್ಲಿಸಬಹುದು.
ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗುತ್ತದೆ ಎಂದರು.ಗುರುವಾರದಿಂದ ಆಫ್ ಲೈನ್ ಹಾಗೂ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದವವರು ತಿಳಿಸಿದರು.
ಈ ಕುರಿತಂತೆ ಅವರು ಟ್ವಿಟರ್‌ನಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕ ಸರ್ಕಾರದ “ ಗೃಹಲಕ್ಷ್ಮೀ ” ಯೋಜನೆಯ ಕುರಿತು ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ.
ಗೃಹಲಕ್ಷ್ಮೀ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ, 2,000/- ಗಳನ್ನು DBT ಮೂಲಕ ನೀಡುವ… pic.twitter.com/MSAQFIQHzS
— Laxmi Hebbalkar (@laxmi_hebbalkar) June 15, 2023