ಬೆಳಗಾವಿ: ಬೆಂಗಳೂರು ವ್ಯಾಪ್ತಿಯಲ್ಲಿ ಗೃಹೋಪಯೋಗಿ ವಸ್ತುಗಳ ಮಾರಾಟದಲ್ಲಿ ಗ್ರಾಹಕರಿಗೆ ಮೋಸ ನಡೆದಿರುವ ಪ್ರಕಾರಗಳಗ ಪೈಕಿ ಸುಮಾರು 2,250 ಪ್ರಕರಣಗಳು ಇತ್ಯರ್ಥವಾಗಿವೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ನೀಡಿದ ಉತ್ತರದಲ್ಲಿ ಈ ಕುರಿತಂತೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಮೋಸ ಮಾಡಿ ಮಾರಾಟ ಮಾಡುತ್ತಿದ್ದ ಕಂಪನಿಗಳ ವಿರುದ್ಧ ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಗೃಹೋಪಯೋಗಿ ವಸ್ತುಗಳಿಗೆ ಸಂಬಂಧಿಸಿದಂತೆ 2,334 ಪ್ರಕರಣಗಳು ದಾಖಲು ಮಾಡಲಾಗಿದ್ದು, 2,250 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಗ್ರಾಹಕರು ಯಾವುದೇ ವಸ್ತುವನ್ನು ಖರೀದಿಸುವ ಅಥವಾ ಯಾವುದೇ ಸೇವೆಯನ್ನು ಪಡೆಯುವಾಗ ವಂಚನೆಗೆ ಒಳಗಾದಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಅಡಿ ಪ್ರಕರಣವನ್ನು ದಾಖಲಿಸಿ, ಪರಿಹಾರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದವರು ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಹೋಟೆಲ್‍ಗಳಲ್ಲಿನ ಪ್ಯಾಕೆಜ್ ತಿಂಡಿ ತಿನಿಸುಗಳ / ವಾಟರ್ ಬಾಟಲ್‍ಗಳ ಮೇಲಿನ ಸರ್ಕಾರ ಘೋಷಣೆಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಪೊಟ್ಟಣ ಸಾಮಗ್ರಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಹೋಟೆಲ್‍ಗಳನ್ನು ಕಾನೂನು ಮಾಪನಶಾಸ್ತ್ರ (ಪೊಟ್ಟಣ ಸಾಮಗ್ರಿ) ನಿಯಮ-2011ರಡಿ ತಪಾಸಣೆ ನಡೆಸಿ ನಿಯಮಾನುಸಾರ ಅಭಿಸಂಧಾನ ಶುಲ್ಕವನ್ನು ವಿಧಿಸಲಾಗುವುದು ಹಾಗೂ ಅಭಿಸಂಧಾನಕ್ಕೆ ಸಹಮತಿಸದ ಹೋಟೆಲ್‌ಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗುತ್ತದೆ ಎಂದವರು ಹೇಳಿದ್ದಾರೆ.






















































