ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನಕ್ಕೊಳಗಾಗಿರುವ ಚಿತ್ರ ನಟಿ ರನ್ಯಾ ರಾವ್ ಅವರ ಜಾಮೀನು ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.
ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಜಾಮೀನು ಮಂಜೂರು ಮಾಡಲು ಸೆಷನ್ಸ್ ಕೋರ್ಟ್ ನಿರಾಕರಿಸಿದೆ. ಈ ಕುರಿತಂತೆ ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ 64ನೇ ಸಿಸಿಹೆಚ್ ಕೋರ್ಟ್ ಗುರುವಾರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಪ್ರಕಟಿಸಿದೆ.