ಕೋಲ್ಕತ್ತಾ: ಆರೆಸ್ಸೆಸ್ ಸಿದ್ದಂತವನ್ನು ಅನುಷ್ಠಾನಕ್ಕೆ ತರಲು ಸಿದ್ಧತೆ ನಡೆಸಿರುವ ಪಶ್ಚಿಮ ಬಂಗಾಳದ ನೂತನ ಬಿಜೆಪಿ ಸರ್ಕಾರ ಇದೀಗ ಗೋ ಕಳ್ಳಸಾಗಾಣಿಕೆಗೆ ಬ್ರೇಕ್ ಹಾಕಿದೆ.
ಅಧಿಕಾರಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ವಿಶೇಷ ಸೂಚನೆಗಳನ್ನು ನೀಡಲಾಗಿದ್ದು, ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲು ನಿರ್ದೇಶಿಸಲಾಗಿದೆ. ಯಾವುದೇ ಕಾರಣಕ್ಕೂ ಗೋವು ಕಳ್ಳಸಾಗಣೆ ನಡೆಯದಂತೆ ತಡೆಯಬೇಕು ಹಾಗೂ ಅಕ್ರಮ ಮಾರುಕಟ್ಟೆಗಳು ಕಾರ್ಯನಿರ್ವಹಿಸದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ.
ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ ನಾಯಕರು, ಪಕ್ಷ ಅಧಿಕಾರಕ್ಕೆ ಬಂದರೆ ಗೋವು ಕಳ್ಳಸಾಗಣೆಯನ್ನು ಸಂಪೂರ್ಣವಾಗಿ ತಡೆದು, ಅದಕ್ಕಾಗಿ ವಿಶೇಷ ಕಣ್ಗಾವಲು ತಂಡ ರಚಿಸಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಸರ್ಕಾರ ರಚನೆಯಾದ ತಕ್ಷಣವೇ ಈ ವಿಚಾರಕ್ಕೆ ಆದ್ಯತೆ ನೀಡಲಾಗಿದೆ.







































































