ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಶತಪ್ರಯತ್ನಕ್ಕಿಳಿದಿದೆ. ಈ ಸಂಬಂಧ ಬೆಂಗಳೂರಿನಲ್ಲಿ ನಡೆದ ಎನ್ಡಿಎ ನಾಯಕರ ಸಭೆ ಗಮನಸೆಳೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್, ರಾಜ್ಯಸಭಾ ಸದಸ್ಯರಾದ ಲೆಹರ್ ಸಿಂಗ್, ಮಾಜಿ ಪರಿಷತ್ ಸದಸ್ಯರಾದ ಅ.ದೇವೇಗೌಡ, ಮುಖ್ಯ ವಕ್ತಾರರು ಅಶ್ವತ್ಥ್ ನಾರಾಯಣ, ರಾಜ್ಯ ಕಾರ್ಯದರ್ಶಿಗಳಾದ ತಿಮ್ಮನಗೌಡ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ
ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪದಾಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.