ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವುದಿಲ್ಲ. ಈ ಬಗ್ಗೆ ಕಾಂಗ್ರೆಸ್ ನಾಯಕರಷ್ಟೇ ಅಲ್ಲ, ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ರಾಜಿನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಳ್ಳಿಹಾಕಿದ್ದಾರೆ.
ಕನಕಪುರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಶಾಸಕರಾಗಿರುವ ತಾನು ಚನ್ನಪಟ್ಟಣದ ವಿಧಾನಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅನಿವಾರ್ಯತೆ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ.