ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಸಮೀಪ ಕಾತ್ರಾಳ ಗ್ರಾಮದ ಬಳಿ ಗುರುವಾರ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಇನ್ನೋವಾ ಕಾರು ಕಾತ್ರಾಳ ಗ್ರಾಮದ ಕೆರೆ ಬಳಿ ಡಿವೈಡರ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಕಾರಿನಲ್ಲಿದ್ದ ತಮಿಳುನಾಡು ಮೂಲದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು 31 ವರ್ಷದ ಶರವಣ, 29 ವರ್ಷದ ಸೇಂದಿಲ್ ಮತ್ತು 28 ವರ್ಷದ ಅರ್ಜುನ್ ಎಂದು ಗುರುತಿಸಲಾಗಿದೆ.
ಅಪಘಾತದ ಸುದ್ದಿ ತಿಳಿದು ಸ್ಥಲಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.