ಶಿರಸಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ನಮ್ಮ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನ ಎದುರಿಸಲು ಸಾಧ್ಯವಾಗದೆ ಭಯ ಸ್ಟಾರ್ಟ್ ಆಗಿದೆ. ಆದ್ದರಿಂದ ಜಾರಿ ನಿರ್ದೇಶನಾಲಯ ಮೂಲಕ ಬೆದರಿಸಲು ಹೊರಟಿದೆ. ಇಡಿ ಅಧಿಕಾರಿಗಳು ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್ ಆಗಿ ಕೆಲಸ ಮಾಡ್ತಿದೆ ಎಂದು ಟೀಕಿಸಿದ್ದಾರೆ.
ಸುಪ್ರೀಂಕೋರ್ಟ್ ಕ್ಲೀನ್ ಚಿಟ್ ಕೊಟ್ಟಿರುವ ಪ್ರಕರಣವನ್ನ ಮತ್ತೆ ತನಿಖೆ ನಡೆಸುತ್ತಿರುವುದು ಬಿಜೆಪಿ ಸರ್ಕಾರದ ನೀಚತನಕ್ಕೆ ಸಾಕ್ಷಿ. ಬಿಜೆಪಿಯ ತರಲೆ ಸಂಸದ ಸುಬ್ರಹ್ಮಣ್ಯ ಸ್ವಾಮಿ ಕೊಟ್ಟ ದೂರಿನ ಮೇಲೆ ತನಿಖೆ ನಡೆಸುವುದಾದರೆ, ಈಗ ಇದೇ ಸಂಸದ ಅಮಿತ್ ಶಾ ಮಗ ಜಯ ಶಾ ಮೇಲೂ ಗಂಭೀರ ಆರೋಪ ಮಾಡಿದ್ದಾರೆ. 50 ಲಕ್ಷ ಇದ್ದ ಜಯ್ ಶಾ ಆದಾಯ ಇಂದು ನೂರಾರು ಕೋಟಿಯಾಗಿದೆ. ಅದರ ಮೂಲದ ಬಗ್ಗೆ ಯಾಕೆ ಇಡಿ ಇಲಾಖೆ ತನಿಖೆ ನಡೆಸುತ್ತಿಲ್ಲ.? ಅಧಿಕಾರಿಗಳಿಗೆ ಧೈರ್ಯ ಇದ್ರೆ ಅಮಿತ್ ಶಾ ಮಗನ ಮೇಲೂ ತನಿಖೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ.
ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚೀಟ್ ಕೊಡ್ತಾರೆ ಅಂತಾ ನಮಗೆ ಮೊದಲೇ ನಿರೀಕ್ಷೆ ಇತ್ತು. ಸಂತೋಷ್ ಪಾಟೀಲ್ ತಮ್ಮ ಡೆತ್ ನೋಟ್ ನಲ್ಲಿ ಈಶ್ವರಪ್ಪನೇ ಕಾರಣ ಎಂದು ಬರೆದುಕೊಂಡಿದ್ರು. ಅವರ ಪತ್ನಿ ಕೂಡ ಮಾಜಿ ಸಚಿವ ಈಶ್ವರಪ್ಪ ಕಾರಣ ಅಂತಲೇ ಹೇಳಿದ್ರು. ಆದ್ರೆ ಸಿಎಂ ಹಾಗೂ ಗೃಹ ಸಚಿವರು ತನಿಖೆ ಮೊದಲೇ ಕ್ಲಿನ್ ಚೀಟ್ ಕೊಟ್ಟಿದ್ರು. ಈಗ ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ತನಿಖೆ ನಡೆಸದೇ ರಿಪೋರ್ಟ್ ಕೊಟ್ಟಿದ್ದಾರೆ.ಈಶ್ವರಪ್ಪ ಮಾಡಿರುವ ಅನಾಹುತಗಳಿಗೆ ಪರಪ್ಪನ ಅಗ್ರಹಾರವಲ್ಲ, ಕಾಲಾಪಾನಿ ಕುಡಿಸಬೇಕು. ದೇಶದಲ್ಲಿ ಅತ್ಯಂತ ಭ್ರಷ್ಟ ರಾಜಕಾರಣಿ, ಕ್ರಿಮಿನಲ್ ರಾಜಕಾರಣಿ, ಗಲಾಟೆ ದೊಂಬಿ ನಡೆಸುವ ರಾಜಕಾರಣಿ ಇದ್ರೆ ಅದು ಈಶ್ವರಪ್ಪ. ಅಂತವರು ಸಾರ್ವಜನಿಕ ಜೀವನದಲ್ಲಿ ಇರೋದಕ್ಕೆ ಅರ್ಹರಲ್ಲ ಎಂದು ಮಾಜಿ ಈಶ್ವರಪ್ಪ ವಿರುದ್ಧ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ರು.
ರಾಜ್ಯದ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಿಎಂ ಮಾಡೋರು ಯಾರು ಅಂತಾ ಡಿಕೆಶಿ ಹಾಗೂ ಸಿದ್ರಾಮಯ್ಯನವರಿಗೆ ತುಂಬಾ ಚೆನಾಗ್ ಗೊತ್ತಿದೆ. ಶಾಸಕರ ಅಭಿಪ್ರಾಯದ ಮೇಲೆ ಹೈಕಮಾಂಡ್ ಹಾಗೂ ಶ್ರೀಮತಿ ಸೋನಿಯಾ ಗಾಂಧಿಯವರೇ ನಿರ್ಧಾರ ಮಾಡ್ತಾರೆ. ಮಾಧ್ಯಮಗಳಲ್ಲಿ ಸೃಷ್ಟಿ ಮಾಡಿರುವ ಹಾಗೆ ಡಿಕೆಶಿ-ಸಿದ್ರಾಮಯ್ಯ ನಡುವೆ ವೈಮನಸ್ಸಿಲ್ಲ. ಅವ್ರು ನಾಟಿ ಕೋಟಿ ಮುದ್ದೆ ಸಾರು ಜೊತೆಯಲ್ಲೇ ತಿನ್ತಾರೆ ಎಂದರು.
ಡಿಸೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತೆ. ಆ ನಿಟ್ಟಿನಲ್ಲಿ ನಾವು ಚುನಾವಣೆ ಎದುರಿಸಲು ಸಿದ್ದರಾಗಿದ್ದೇವೆ. ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದವರು ತಿಳಿಸಿದರು.




















































