ಮೈಸೂರು: ದಾವಣಗೆರೆ ಜಿಲ್ಲೆ ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಯುವಕನ ಸಾವು ಪ್ರಕರಣ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದಿರುವುದು ಲಾಕಪ್ ಡೆತ್ ಅಲ್ಲ ಎಂದು ಸ್ಪಷ್ಟನೆ ನೀಡಿದರು. ಯುವಕನಿಗೆ ಮೂರ್ಛೆ ರೋಗ ಇತ್ತು. ಹಾಗಾಗಿ ಆತ ಮೃತ ಪಟ್ಟಿದ್ದಾನೆ ಎಂದವರು ತಿಳಿಸಿದ್ದಾರೆ.
ಇದೇ ವೇಳೆ, ಎಫ್ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಯುವಕನನ್ನು ಕರೆ ತಂದಿದ್ದು ತಪ್ಪು ಎಂದಿರುವ ಸಿಎಂ, ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ಅಮಾನತಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.




















































