ಬೆಂಗಳೂರು: ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ವಿಸರ್ಜಿಸಿ ಎಂದು ಗಾಂಧೀಜಿ ಪ್ರತಿಪಾದಿಸಿದ್ದರು. ಆದರೆ ನಕಲಿ ಗಾಂಧಿಗಳು, ನಕಲಿ ಕಾಂಗ್ರೆಸ್ಸಿಗರು ಗಾಂಧೀಜಿ ಮಾತಿಗೆ ಬೆಲೆ ಕೊಡಲಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ ಎಂಬಂತೆ ಈಗ ಜನರೇ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ, ಇನ್ನಾದರೂ ನಕಲಿ ಗಾಂಧಿ ಕುಟುಂಬ ಪೂಜಕರು ಬುದ್ದಿ ಕಲಿಯಬಹುದೇ? ಎಂದು ಪ್ರಶ್ನಿಸಿದೆ.
ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ವಿಸರ್ಜಿಸಿ ಎಂದು ಗಾಂಧೀಜಿ ಪ್ರತಿಪಾದಿಸಿದ್ದರು.
ಆದರೆ ನಕಲಿ ಗಾಂಧಿಗಳು, ನಕಲಿ ಕಾಂಗ್ರೆಸ್ಸಿಗರು ಗಾಂಧೀಜಿ ಮಾತಿಗೆ ಬೆಲೆ ಕೊಡಲಿಲ್ಲ.
ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ ಎಂಬಂತೆ ಈಗ ಜನರೇ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಿದ್ದಾರೆ.
ಇನ್ನಾದರೂ ನಕಲಿ ಗಾಂಧಿ ಕುಟುಂಬ ಪೂಜಕರು ಬುದ್ದಿ ಕಲಿಯಬಹುದೇ?
— BJP Karnataka (@BJP4Karnataka) March 13, 2022
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಒಂದಷ್ಟು ಜನ ಸೋನಿಯಾ ಹಾಗೂ ಪ್ರಿಯಾಂಕಾ ಗಾಂಧಿ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನೈತಿಕ ಹೊಣೆ ಎಂಬ ಶಬ್ದಕ್ಕೆ ಅರ್ಥವಿದೆಯೇ? ಅವರವರೇ, ಅವರ ಕುಟುಂಬದೊಳಗೆ ಜವಾಬ್ದಾರಿ ಹಂಚಿಕೊಳ್ಳುವ ವಾಸ್ತವತೆಯಲ್ಲಿ ನಕಲಿ ಗಾಂಧಿಗಳು ರಾಜೀನಾಮೆ ನೀಡುವುದು ಹೇಗೆ ಸಾಧ್ಯ? ಎಂದೂ ಬಿಜೆಪಿ ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಒಂದಷ್ಟು ಜನ ಸೋನಿಯಾ ಹಾಗೂ ಪ್ರಿಯಾಂಕಾ ಗಾಂಧಿ ಅವರ ರಾಜೀನಾಮೆ ಕೇಳುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ನೈತಿಕ ಹೊಣೆ ಎಂಬ ಶಬ್ದಕ್ಕೆ ಅರ್ಥವಿದೆಯೇ?
ಅವರವರೇ, ಅವರ ಕುಟುಂಬದೊಳಗೆ ಜವಾಬ್ದಾರಿ ಹಂಚಿಕೊಳ್ಳುವ ವಾಸ್ತವತೆಯಲ್ಲಿ ನಕಲಿ ಗಾಂಧಿಗಳು ರಾಜೀನಾಮೆ ನೀಡುವುದು ಹೇಗೆ ಸಾಧ್ಯ?
— BJP Karnataka (@BJP4Karnataka) March 13, 2022