ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಹೊಸ ಪಕ್ಷ ಸ್ಥಾಪಿಸಿ ಪ್ರಚಾರದ ಅಖಾಡದಲ್ಲಿ ಮಿಂಚುತ್ತಿರುವ ಜನಾರ್ಧನ ರೆಡ್ಡಿ ಅವರಿಗೆ ಆಸ್ತಿ ಜಪ್ತಿಯ ಸವಾಲು ಎದುರಾಗಿದೆ.
ಅಕ್ರಮ ಗಣಿಗಾರಿಕೆ ಕುರಿತ ಪ್ರಕರಣದ ವಿಚಾರಣೆ ಪ್ರಗತಿಯಲ್ಲಿರುವಂತೆಯೇ, ಹೈಕೋರ್ಟ್ ಬೆಳವಣಿಗೆಯನ್ನಾಧರಿಸಿ ರಾಜ್ಯ ಸರ್ಕಾರ ಜನಾರ್ದನ ರೆಡ್ಡಿ ಹಾಗೂ ಕುಟುಂಬಸ್ಥರಿಗೆ ಸೇರಿದ ಹೆಚ್ಚುವರಿ ಆಸ್ತಿ ಜಪ್ತಿ ಕುರಿತ ಆದೇಶ ಪ್ರಕ್ರಿಯೆ ಆರಂಭಿಸಿದೆ.
ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಕುಟುಂಬದ ಸದಸ್ಯರ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರದ ಪರ ವಕೀಲರು, ಈ ಬೆಳವಣಿಗೆಯ ಬೆನ್ನಲ್ಲೇ ಸರ್ಕಾರದ ಪಾಳಯದಲ್ಲೂ ವಿದ್ಯಮಾನಗಳು ಬಿರುಗೊಂಡಿವೆ.
























































