ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದೆ. ದೇಶ ವಿದ್ರೋಹಿಗಳನ್ನು ಮಟ್ಟಹಾಕಲು ಅಖಾಡಕ್ಕೆ ಧುಮುಕಿರುವ ಸೇನೆ ಸೋಮವಾರ ಮತ್ತೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಆರು ಯೋಧರು ಹುತಾತ್ಮರಾಗಿದ್ದಾರೆ.
ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದಲ್ಲಿ ಸೋಮವಾರ ಉಗ್ರರು ಸೇನಾ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿ, 6 ಮಂದಿ ಗಾಯಗೊಂಡಿದ್ದಾರೆ.
ಲೋಹೈ ಮಲ್ಹಾರ್‌ನ ಬದ್ನೋಟಾ ಎಂಬಲ್ಲಿ ಮಧ್ಯಾಹ್ನ ಉಗ್ರರು ಸೇನಾ ವಾಹನದ ಮೇಲೆ ಗ್ರೇನೆಡ್ ಹಾಗೂ ಗುಂಡಿನ ದಾಳಿ ನಡೆಸಿ ಪೈಶಾಚಿಕತೆ ಮೆರೆದಿದ್ದಾರೆ. ಕಥುವಾ ಜಿಲ್ಲೆಯಲ್ಲಿ ಕಳೆದ ತಿಂಗಳಿನಿಂದೀಚೆಗೆ ನಡೆದ ಎರಡನೇ ಪ್ರಮುಖ ಘಟನೆ ಇದಾಗಿದ್ದು ಉಗ್ರರ ವಿರುದ್ದ ಸೇನೆ ಕಾರ್ಯಾಚರಣೆಯನ್ನು ಬಿರುಸುಗೊಳಿಸಿದೆ.