ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಗೆದ್ದು ಬೀಗಿದೆ.
ವಿಧಾನಸಭಾ ಚುನಾವಣೆಯ ಮತಗಳ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಬಹುಮತ ಗಳಿಸಿದೆ.
90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚನೆ 46 ಸ್ಥಾನಗಳ ಅಗತ್ಯ ಇದ್ದು ಅದರಂತೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ 48 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗಿದೆ.