ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ಗುರುವಾರ ವಿಫಲಗೊಳಿಸಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಗುರೆಜ್ ಸೆಕ್ಟರ್‌ನ ನೌಶೆಹ್ರಾ ನಾರ್ಡ್ ಬಳಿ ಒಳನುಸುಳುವಿಕೆ ಪ್ರಯತ್ನದ ಸಮಯದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.