ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ರಜೌರಿಯ ಪೂಂಚ್ ಬಳಿ ಗುರುವಾರ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮತ್ತೋಬ್ಬ ಯೋಧ ಹುತಾತ್ಮರಾಗಿದ್ದಾರೆ. ಈ ಮೂಲಕ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಗುರುವಾರ ಪೂಂಚ್ ನವ್ವಿ ಥಾನಮಂಡಿಯಲ್ಲಿ ಉಗ್ರರು ಸೇನಾ ವಾಹನಗಳ ಮೇಲೆ ದಾಳಿ ನಡೆಸಿದ್ದರು. ಆ ವೇಳೆ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಕಾಳಗ ನಡೆದಿದೆ. ಕಾರ್ಯಾಚರಣೆಯಲ್ಲಿ ಮೂವರು ಯೋಧರು ಬಲಿಯಾಗಿದ್ದರು.
ಗಾಯಗೊಂಡಿದ್ದ ಇಬ್ಬರ ಪೈಕಿ ಒಬ್ಬ ಯೋಧ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಹುತಾತ್ಮರಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಈ ಘಟನೆಯ ನಂತರ ಕಣಿವೆ ರಾಜ್ಯದಲ್ಲಿ ಸೇನಾ ಕಾರ್ಯಾಚರಣೆಯನ್ನು ಬಿರುಸುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.





































































