ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದ ಸುಳಿಯಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪಲಾಯನವಾಗಿದ್ದಾರೆ ಎನ್ನಲಾಗಿದ್ದು, ಇದೀಗ ಮೇ 31ರಂದು ಸ್ವದೇಶಕ್ಕೆ ಮರಳುವ ಸಾಧ್ಯತೆಗಳಿವೆ. ಈ ಬಗ್ಗೆ ಮಾಹಿತಿ ಕಲೆಹಾಕಿರುವ ವಿಶೇಷ ತನಿಖಾ ತಂಡ, ಪ್ರಜ್ವಲ್ ರೇವಣ್ಣ ಅವರು ಜರ್ಮಿನಿಯಿಂದ ಬೆಂಗಳೂರಿಗೆ ಬರಲು ಲುಫ್ತಾನ್ಸಾ ಏರ್ಲೈನ್ಸ್ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿರುವ ಸುದ್ದಿಯತ್ತ ಚಿತ್ತ ಹರಿಸಿದ್ದಾರೆ.
ವಿದೇಶಕ್ಕೆ ಪಲಾಯನ ಮಾಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಭಾರತಕ್ಕೆ ವಾಪಸ್ಸಾಗುವುದಾಗಿ ಹೇಳಿದ್ದರು. ಈ ನಡುವೆ, ಮೇ 31ರಂದು ಭಾರತಕ್ಕೆ ಮರಳಲು ವಿಮಾನ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.


























































