ನವದೆಹಲಿ: ನವದೆಹಲಿಯಲ್ಲಿ ಕೇಂದ್ರ ಸಚಿವ ಸಿ.ಆರ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ನಡುವೆ ಜಲ ಜೀವನ ಮಿಷನ್ 2.0 ಅಡಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕೇಂದ್ರ ಜಲಶಕ್ತಿ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಹಾಜರಿದ್ದರು.
ಈ ಸಂದರ್ಭದಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಕುರಿತಂತೆ ಕೇಂದ್ರ ಜಲಶಕ್ತಿ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ, ಈ ಒಪ್ಪಂದವು ಜಲ ಸಂಪನ್ಮೂಲಗಳ ಸಂರಕ್ಷಣೆ, ಪರಿಣಾಮಕಾರಿ ಕಾರ್ಯಾಚರಣೆ ಮತ್ತು ನಿರ್ವಹಣೆ, ನೀರಿನ ಗುಣಮಟ್ಟ ನಿರ್ವಹಣೆ ಮತ್ತು ದೀರ್ಘಕಾಲೀನ ನೀರಿನ ಸುರಕ್ಷತೆಯ ಕಡೆಗೆ ಕೇಂದ್ರ-ರಾಜ್ಯ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ, ಕರ್ನಾಟಕ ರಾಜ್ಯದಲ್ಲಿನ ಜಲ ಜೀವನ್ ಮಿಷನ್‌ನ ಪರಿಣಾಮಕಾರಿ ಮತ್ತು ಗುಣಮಟ್ಟದ ಅನುಷ್ಠಾನಕ್ಕಾಗಿ ವಿವಿಧ ಪ್ರಮುಖ ಸಲಹೆಗಳನ್ನು ಸಹ ವಿವರವಾಗಿ ಚರ್ಚಿಸಲಾಯಿತು ಎಂದವರು ವಿವರಿಸಿದರು.




















































