ನವದೆಹಲಿ: ಜಾರ್ಖಂಡ್‌ನ ಚಕ್ರಧರಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ರೈಲು ದುರಂತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ.
#WATCH | Jharkhand: Train No. 12810 Howara-CSMT Express derailed near Chakradharpur, between Rajkharswan West Outer and Barabamboo in Chakradharpur division at around 3:45 am.
Two people have lost their lives so far.
( Latest Visuals from the spot) pic.twitter.com/qYAmk2bpEg
— ANI (@ANI) July 30, 2024
ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗ ವ್ಯಾಪ್ತಿಯ ಜಮ್ಶೆಡ್‌ಪುರದಿಂದ 80 ಕಿಮೀ ದೂರದಲ್ಲಿರುವ ಬಾರಾಬಾಂಬೂ ಎಂಬಲ್ಲಿ ಅಪಘಾತ ಸಂಭವಿಸಿದೆ. ರಾಜ್‌ಖರ್ಸಾವನ್ ಮತ್ತು ಬಡಬಾಂಬೋ ನಿಲ್ದಾಣಗಳ ನಡುವೆ ಕುಗ್ರಾಮದಲ್ಲಿ ಹೌರಾ-ಸಿಎಸ್‌ಎಂಟಿ ಎಕ್ಸ್‌ಪ್ರೆಸ್‌ನ 18 ಬೋಗಿಗಳು ಹಳಿತಪ್ಪಿ ಈ ದುರಂತ ಸಂಭವಿಸಿದೆ. ಈ ಅವಘಡದಲ್ಲಿ 20 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಎನ್‌ಡಿಆರ್‌ಎಫ್ ತಂಡ ಹಾಗೂ ರೈಲ್ವೇ ಸುರಕ್ಷಾ ಪಡೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.
ಈ ದುರಂತದಿಂದಾಗಿ ಹೌರಾ-ಮುಂಬೈ ಮಾರ್ಗಗಳಲ್ಲಿ ರೈಲು ಸಂಚಾರ ಏರುಪೇರಾಗಿದೆ. ಈ ಮಾರ್ಗಗಳಲ್ಲಿ ಸಂಚರಿಸುವ ಎಕ್ಸ್‌ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಆಗ್ನೇಯ ರೈಲ್ವೆ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.