ಧಾರವಾಡ; ಈ ಬಾರಿಯ ಲೋಕಸಭಾ ಚನಾವಣೆಯ ಮೂರನೇ ಹಂತದ ಮತದಾನ ಉತ್ತರ ಕರ್ನಾಟಕ ಭಾಗದ 14 ಜಿಲ್ಲೆಗಳಲ್ಲಿ ನಡೆಯುತ್ತಿದ್ದು ಹಾವೇರಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳ ಅಖಾಡ ಕುತೂಹಲ ಕೆರಳಿಸಿದೆ. ಈ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳಿಬ್ಬರ ಭವಿಷ್ಯ ನಿರ್ಧಾರವಾಗಲಿದೆ.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಸ್ಪರ್ಧಿಸಿದ್ದು ಅವರದ್ದು ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ್ದಕ್ಕೆ ಸಿಡಿದೆದ್ದು ಕಾಂಗ್ರೆಸ್ ಸೇರಿದ್ದ ಶೆಟ್ಟರ್, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇದೀಗ ಅವರ ರಾಜಕೀಯ ಭವಿಷ್ಯ ಈ ಚುನಾವಣೆಯಲ್ಲಿ ನಿರ್ಧಾರವಾಗಲಿದೆ.