ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನ್ಯಾಮತಿ ತಾಲ್ಲೂಕಿನಲ್ಲಿ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಗಳ ಕಡೆ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹಾಗೂ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಿ, ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು.
ಕಂದಾಯ ಸಚಿವ ಆರ್.ಅಶೋಕ್, ಆರ್.ಡಿ.ಪಿ.ಆರ್. ಸಚಿವ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕ ಎಸ್.ವಿ.ರಾಮಚಂದ್ರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.