ಬೆಂಗಳೂರು: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ವರ್ಗವು ಜೂನ್ 16ರಿಂದ 18ರವರೆಗೆ ಯಲಹಂಕದ ಹೋಟೆಲ್ ರಮಡಾದಲ್ಲಿ ನಡೆಯಲಿದೆ ಎಂದು ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ತಿಳಿಸಿದ್ದಾರೆ.
ಜೂನ್ 16ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್ ಅವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ದೇಶದ ವಿವಿಧ ರಾಜ್ಯಗಳ ಒಬಿಸಿ ಮೋರ್ಚಾ ಅಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಪ್ರಶಿಕ್ಷಣ ವರ್ಗದ ಸಂಚಾಲಕರು ಪಾಲ್ಗೊಳ್ಳುವರು ಎಂದು ಅವರು ತಿಳಿಸಿದ್ದಾರೆ.




















































