ಬೆಂಗಳೂರು: ಈ ತಿಂಗಳ 17ರಂದರ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದ ಜೆಡಿಎಸ್ ಪಕ್ಷದ ʼಜನತಾಮಿತ್ರʼ ಕಾರ್ಯಕ್ರಮವನ್ನು 10 ದಿನಗಳ ಕಾಲ ಮುಂದೂಡಲಾಗಿದೆ ಎಂದು ಜೆಡಿಎಸ್ ನಾಯಕ ಬಂಡೆಪ್ಪ ಕಾಶಾಂಪುರ್ ತಿಳಿಸಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಇದೇ ತಿಂಗಳು 17ರಂದರ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದ ʼಜನತಾಮಿತ್ರʼ ಕಾರ್ಯಕ್ರಮವನ್ನು 10 ದಿನಗಳ ಕಾಲ ಮುಂದೂಡಲಾಗಿದೆ ಎಂದು ತಿಳಿಸಿದರು.
ಸಿದ್ದರಾಮೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕಾಶೆಂಪೂರ್ ಅವರು, ನಾವು ಜನರ ಉತ್ಸವ ಮಾಡುತ್ತೇವೆ. ಪಕ್ಷ ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಅಂತ ನಾವು ತೋರಿಸಿದ್ದೇವೆ. ನೀರಾವರಿ ವಿಚಾರದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಆದರೆ ಇವತ್ತು ಸುರಿಯುತ್ತಿರುವ ಮಳೆ ನೀರು ಸಮುದ್ರದ ಪಾಲಾಗುತ್ತಿದೆ. ನಮ್ಮ ದೃಷ್ಟಿ ಜನರ ಕಡೆಗೆ. ಹೀಗಾಗಿ ನಾವು ಯಾವುದೇ ಉತ್ಸವ ಮಾಡುವುದಿಲ್ಲ. ನಾವು ಜನರ ಉತ್ಸವ ಮಾಡಿದ್ದೇವೆ. ನಾವು ವಯಕ್ತಿಕ ಉತ್ಸವ ಮಾಡುವುದಿಲ್ಲ. ಜನರಿಗೆ ನಾವು ಏನು ಮಾಡುತ್ತೇವೆ ಎಂಬುದನ್ನು ಹೇಳಿ ಜನರ ಮುಂದೆ ಹೋಗುತ್ತೇವೆ” ಎಂದು ಹೇಳಿದರು.



























































