ಬೆಂಗಳೂರು: ಜೈನ ಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಅಮಾನುಷ ಹತ್ಯೆಯ ಪ್ರಕರಣದಿಂದ ತೀವ್ರ ಆಘಾತವಾಗಿದೆ, ಶಾಂತಿ, ಅಹಿಂಸೆಯ ಪ್ರತಿಪಾದಕರಾಗಿದ್ದ ಅವರನ್ನು ಭೀಕರವಾಗಿ ಹತ್ಯೆಗೈದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕಾಂಗ್ರೆಸ್ ಹೇಳಿದೆ. ಈ ಹತ್ಯೆ ಖಂಡಿಸಿ, ಜೈನ ಮುನಿಗಳಿಗೆ ರಕ್ಷಣೆ ಕೋರಿ ವರೂರು ಶ್ರೀ ಗುಣಾಧರನಂದಿ ಮಹಾರಾಜ ಸ್ವಾಮೀಜಿಗಳು ಅನ್ನ ನೀರು ತ್ಯಜಿಸಿ ನಡೆಸುತ್ತಿರುವ ಅಮರಣಾಂತ ಸತ್ಯಾಗ್ರಹವನ್ನು ಕೈಬಿಡಬೇಕು ಎಂದು ಕಾಂಗ್ರೆಸ್ ಮನವಿ ಮಾಡಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ,. ಧರ್ಮ ರಕ್ಷಕರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದಿದೆ. ಪೊಲೀಸರು ಈ ಪ್ರಕರಣವನ್ನು ಸಮರ್ಥವಾಗಿ ಬೇಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷ್ಯಗಳನ್ನು ಕಲೆಹಾಕಿ, ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದೆ.
ಜೈನ ಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಅಮಾನುಷ ಹತ್ಯೆಯ ಪ್ರಕರಣದಿಂದ ತೀವ್ರ ಆಘಾತವಾಗಿದೆ, ಶಾಂತಿ, ಅಹಿಂಸೆಯ ಪ್ರತಿಪಾದಕರಾಗಿದ್ದ ಅವರನ್ನು ಭೀಕರವಾಗಿ ಹತ್ಯೆಗೈದವರಿಗೆ ಕಠಿಣ ಶಿಕ್ಷೆಯಾಗಬೇಕು.
ಪೊಲೀಸರು ಈ ಪ್ರಕರಣವನ್ನು ಸಮರ್ಥವಾಗಿ ಬೇಧಿಸಿದ್ದಾರೆ.
ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷ್ಯಗಳನ್ನು ಕಲೆಹಾಕಿ,…
— Karnataka Congress (@INCKarnataka) July 9, 2023