ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿದ್ಯಾರಣ್ಯಪುರ ಬಳಿ ಜೈಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಕುರಿತಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣದಲ್ಲಿ ಹಲ್ಲೆಗೊಳಗಾದವಾರ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದ ಶೋಭಾ ಕರಂದ್ಲಾಜೆ, ಘಟನೆಯನ್ನು ಖಂಡಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆ ಗಲಭೆ ಎಬ್ಬಿಸಿ ಮತ್ತಷ್ಟು ತೊಂದರೆಗೆ ಪ್ರಯತ್ನ ಮಾಡಲಾಗಿದೆ. ಕಾಂಗ್ರೆಸ್ ಮುಖಂಡರ ಕುಮ್ಮಕ್ಕಿನಿಂದ ಈ ಘಟನೆ ನಡೆದಿದ್ದರೆ ಖಂಡಿತ ನಾವು ಸುಮ್ಮನೆ ಇರುವುದಿಲ್ಲ, ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಇಂತಹಾ ಘಟನೆಗಳನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.