ಚಿಕ್ಕಮಗಳೂರು: ಶಾಸಕ ವೈ.ಎಸ್.ವಿ.ದತ್ತಾ ಅವರು ಇಂಟರ್ ನ್ಯಾಷನಲ್ ಪಕ್ಷ ಸೇರಲು ಹೊರಟಿರುವವರು ಎಂದು ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವ ವೈ.ಎಸ್.ವಿ.ದತ್ತಾ ಅವರು ಕಡೂರು ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದರು. ಆದರೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದೆ ಇದೀಗ ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಸುದ್ದಿಗಾರರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಕೇಳಿದಾಗ ‘ವೈ.ಎಸ್.ವಿ. ದತ್ತ ಅವರು ತುಂಬಾ ದೊಡ್ಡವರು ಅವರ ಬಗ್ಗೆ ಗೊತ್ತಿಲ್ಲ. ಅವರ ಬಗ್ಗೆ ನಾನೇಕೆ ಚರ್ಚೆ ಮಾಡಲಿ’ ಎಂದರು.
ನನ್ನದು ಸಣ್ಣ ಪಕ್ಷ ನನ್ನ ಪಕ್ಷಕ್ಕೆ ಅವರೇಕೆ ಬರುತ್ತಾರೆ ಅವರು ಇಂಟರ್ ನ್ಯಾಷನಲ್ ಪಕ್ಷ ಸೇರಲು ಹೊರಟಿರುವವರು, ನನ್ನ ಪಕ್ಷದಲ್ಲಿ ಪಾಪ ಅವರಿಗೆ ಏನು ಸಿಗುತ್ತದೆ. ಅವರು ದೊಡ್ಡ ಪಕ್ಷದಲ್ಲೇ ಇರಲಿ ಎಂದು ಹೆಚ್ಡಿಕೆ ಹೇಳಿದರು.


























































