ಚೆನ್ನೈ: ನಟ-ರಾಜಕಾರಣಿ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK – Tamilaga Vetri Kazhagam) ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ ಕೋರಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಟಿವಿಕೆ ಮುಖ್ಯಸ್ಥ ವಿಜಯ್ ಸರ್ಕಾರ ರಚಿಸಲು ಅಗತ್ಯ ಸಂಖ್ಯಾಬಲಕ್ಕಾಗಿ ಕಾಂಗ್ರೆಸ್ ಅನ್ನು ಸಂಪರ್ಕಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (K.C. Venugopal) ಪ್ರತಿಕ್ರಿಯಿಸಿ, ತಮಿಳುನಾಡಿನ ಜನಾದೇಶವು ಸಂವಿಧಾನವನ್ನು ಕಾಪಾಡುವ ಜಾತ್ಯತೀತ ಸರ್ಕಾರಕ್ಕೆ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.
#WATCH | Delhi: Congress General Secretary (Organisation) K.C. Venugopal says, "…TVK president Vijay has requested INC for support to form a Govt in Tamil Nadu. INC is clear that the mandate in Tamil Nadu is for a secular govt, committed to protecting the constitution in letter… pic.twitter.com/W40qX7HKHu
— ANI (@ANI) May 5, 2026
“ತಮಿಳುನಾಡಿನಲ್ಲಿ ಜನರು ನೀಡಿದ ತೀರ್ಪು ಸಂವಿಧಾನ ಮೌಲ್ಯಗಳನ್ನು ಉಳಿಸುವ ಸರ್ಕಾರದ ಪರವಾಗಿದೆ. ಬಿಜೆಪಿ ಮತ್ತು ಅದರ ಪ್ರತಿನಿಧಿಗಳು ಯಾವುದೇ ರೀತಿಯಲ್ಲಿ ಸರ್ಕಾರ ನಡೆಸಲು ಅವಕಾಶ ನೀಡಬಾರದು ಎಂಬ ನಿಲುವು ನಮ್ಮದಾಗಿದೆ,” ಎಂದು ಅವರು ಸ್ಪಷ್ಟಪಡಿಸಿದರು.
ಆದರೆ, ಟಿವಿಕೆಗೆ ಬೆಂಬಲ ನೀಡುವ ಕುರಿತು ಅಂತಿಮ ತೀರ್ಮಾನವನ್ನು ತಮಿಳುನಾಡು ಕಾಂಗ್ರೆಸ್ ಸಮಿತಿಗೆ ಬಿಟ್ಟಿರುವುದಾಗಿ ಅವರು ಹೇಳಿದ್ದಾರೆ. ರಾಜ್ಯದ ರಾಜಕೀಯ ಪರಿಸ್ಥಿತಿ ಹಾಗೂ ಚುನಾವಣಾ ಭಾವನೆಗಳನ್ನು ಪರಿಗಣಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.




















































