ಬೆಂಗಳೂರು: ಟೆಲಿಫೋನ್ ಟ್ಯಾಪಿಂಗ್ ಆರೋಪ ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕುಮಾರಸ್ವಾಮಿ ಅವರ ಟೆಲಿಫೋನ್ ಟ್ಯಾಪಿಂಗ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, “ಅವರಲ್ಲಿ ಏನೋ ಸಮಸ್ಯೆ ಇರಬೇಕು. ಅವರು ಹಿಂದೆ ಇಂತಹ ಹೀನಾಯ ಕೆಲಸಗಳನ್ನು ಮಾಡಿರಬೇಕು. ಅದಕ್ಕಾಗಿ ಅದನ್ನು ಬೇರೆಯವರ ಮೇಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ” ಎಂದರು.
ಇದೇ ವೇಖೆ, ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ ಎಂಬ ಬಿಜೆಪಿ ಟೀಕೆ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, “ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಯವರಿಗೆ 7 ತಿಂಗಳು ಬೇಕಾಯಿತು. ಇದು ಬಿಜೆಪಿಯ ಅಸಮರ್ಥತೆಗೆ ಸಾಕ್ಷಿ. ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಶೂನ್ಯ” ಎಂದು ತಿರುಗೇಟು ನೀಡಿದರು.

























































