ನವದೆಹಲಿ: ಗುರುವಾರ ನಿಧನರಾದ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು.
ಪ್ರಧಾನಿ ಶ್ರೀ @narendramodi , ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda , ಕೇಂದ್ರ ಗೃಹ ಸಚಿವರಾದ ಶ್ರೀ @AmitShah ಸೇರಿದಂತೆ ಅನೇಕ ಗಣ್ಯರು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. pic.twitter.com/s7Rx1gkl2Z
— BJP Karnataka (@BJP4Karnataka) December 27, 2024
ಮನಮೋಹನ್ ಸಿಂಗ್ ಅವರ ದೆಹಲಿಯ ನಿವಾಸದಲ್ಲಿದ್ದು ಪ್ರತೀವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದ್ದು ಗಣ್ಯರು ಸಿಂಗ್ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಮನಮೋಹನ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು.
Paid tributes to Dr. Manmohan Singh Ji at his residence. India will forever remember his contribution to our nation. pic.twitter.com/nnNZjiSowN
— Narendra Modi (@narendramodi) December 27, 2024
ಪ್ರಧಾನಿ ಮೋದಿ ಜೊತೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು. ಕೇಂದ್ರ ಸಚಿವ ಜೆ.ಪಿ.ನಡ್ಡಾ ಸಹಿತ ಅನೇಕ ನಾಯಕರೂ ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದರು.
The passing away of Dr. Manmohan Singh Ji is deeply saddening. I extend my condolences to his family and admirers.https://t.co/6YhbaT99dq
— Narendra Modi (@narendramodi) December 27, 2024