ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪರ್ಧಿಸುತ್ತಿರುವ ಕನಪುರ ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಡಿಕೆ ಸುರೇಶ್ ಅವರೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದಾರೆ. ಇಂದು ಡಿ.ಕೆ.ಸುರೇಶ್ ಅವರು ಉಮೇದುವಾರಿಕೆ ಸಲ್ಲಿಸಿದರು.
ಕನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಶಿವಕುಮಾರ್ ಅವರು ಈಗಾಗಲೇ ನಾಮಪತ್ರ ಸಲ್ಲಿದ್ದಾರೆ. ಒಂದುವೇಳೆ, ತಾಂತ್ರಿಕ ಕಾರಣಗಳಿಂದಾಗಿ ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡರೆ ಪರ್ಯಾಯ ಅಭ್ಯರ್ಥಿ ಕಣದಲ್ಲಿರಬಹುದೆಂಬ ಲೆಕ್ಕಾಚಾರದಲ್ಲಿ ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

























































