ಢಾಕಾ: ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 17 ಮಂದಿ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಶನಿವಾರ ಬೆಳಿಗ್ಗೆ ರಾಜಧಾನಿ ಢಾಕಾದಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿ ಪ್ರಯಾಣಿಕರ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದು ಈ ಘಟನೆ ನಡೆದಿದೆ.
ಸ್ಥಳೀಯ ಪೊಲೀಸರ ಪ್ರಕಾರ, 13 ಪ್ರಯಾಣಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಗಾಯಗೊಂಡಿರುವ ಕೆಲ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಇದೆ.