ಚೆನ್ನೈ: ಕನ್ನಡ ಭಾಷೆಯ ಉಗಮದ ಬಗ್ಗೆ ನಟ ಕಮಲ್ ಹಾಸನ್ ಆಡಿರುವ ಮಾತುಗಳು ವಿವಾದ ಎಬ್ಬಿಸಿವೆ. ಕನ್ನಡಿಗರ ಆಕ್ರೋಶ ಪ್ರತಿಕ್ರಿಯಿಸಿರುವ ‘ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.
‘ನನ್ನಿಂದ ತಪ್ಪು ಆಗಿದ್ದರೆ ಮಾತ್ರ ಕ್ಷಮೆಯಾಚಿಸುವೆ, ನನ್ನಿಂದ ತಪ್ಪು ಆಗಿಲ್ಲ, ಹಾಗಾಗಿ ನಾನು ಕ್ಷಮೆ ಕೇಳಲ್ಲ ಎಂದಿರುವ ಅವರು, ಯಾವುದೇ ಬೆದರಿಕೆ, ಎಚ್ಚರಿಕೆಗೆ ಹೆದರುವುದಿಲ್ಲ ಎಂದಿದ್ದಾರೆ. ನಾನು ಕಾನೂನು & ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ’ ಎಂದು ಕಮಲ್ ಹಾಸನ್ ಸ್ಪಷ್ಟಪಡಿಸಿದ್ದಾರೆ.
ಕಮಲ್ ಹಾಸನ್ ಸಿನಿಮಾ ‘ಥಗ್ ಲೈಫ್’ನ ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ನೀಡದಿರಲು ಫಿಲಂ ಚೇಂಬರ್ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಸ್ಪಷ್ಟನೆ ನೀಡಿದ್ದಾರೆ. ಆದರೆ ಕ್ಷಮೆ ಕೇಳಬೇಕೆಂಬ ಫಿಲಂ ಚೇಂಬರ್ ಮನವಿಯನ್ನು ಅವರು ತಳ್ಳಿಹಾಕಿದ್ದಾರೆ.