ತುಮಕೂರು : ತುಮಕೂರು ಜಿಲ್ಲೆಯಲ್ಲಿ ಲಾರಿ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿ 9 ಮಂದಿ ಸಾವನ್ನಪ್ಪಿದ್ದಾರೆ.
ಇಂದು ಬೆಳ್ಳಂಬೆಳಿಗ್ಗೆ ಲಾರಿ ಮತ್ತು ಕ್ಯೂಸರ್ ನಡುವೆ ಅಪಘಾತ ಸಂಭವಿಸಿದೆ. ಒಂಬತ್ತು ಮಂದಿ ಸಾವನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಲೇನಹಳ್ಳಿ ಗೇಟ್ ಬಳ್ಳಿ ಈ ಅಪಘಾತ ಸಂಭವಿಸಿದೆ.
ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ಯೂಸರ್ ಹಾಗೂ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ನಡುವೆ ಈ ಡಿಕ್ಕಿ ಸಂಭವಿಸಿದೆ. ಅಪಘಾತದ ಸ್ಥಳಕ್ಕೆ ತುಮಕೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ